1ಕೀರ್ತನೆ. ಕೃತಜ್ಞತೆಯ ಗೀತೆ. ಸಮಸ್ತ ಭೂಮಿಯೇ, ಯೆಹೋವ ದೇವರಿಗೆ ಜಯಧ್ವನಿ ಮಾಡಿರಿ.
2ಸಂತೋಷದಿಂದ ಯೆಹೋವ ದೇವರನ್ನು ಆರಾಧಿಸಿರಿ; ಆನಂದದಿಂದ ಹಾಡುತ್ತಾ ಅವರ ಮುಂದೆ ಬನ್ನಿರಿ.
3ಯೆಹೋವ ದೇವರೇ ದೇವರೆಂದು ತಿಳುಕೊಳ್ಳಿರಿ; ಅವರೇ ನಮ್ಮನ್ನು ಉಂಟುಮಾಡಿದ್ದಾರೆ; ನಾವು ಅವರ ಜನರೂ, ಅವರು ಮೇಯಿಸುವ ಕುರಿ ಮಂದೆಯೂ ಆಗಿದ್ದೇವೆ.
4ಕೃತಜ್ಞತೆಯಿಂದ ಅವರ ಬಾಗಿಲುಗಳಿಗೂ, ಕೃತಜ್ಞತಾ ಸ್ತೋತ್ರದಿಂದ ಅವರ ಅಂಗಳಗಳಿಗೂ ಬನ್ನಿರಿ; ಅವರನ್ನು ಕೊಂಡಾಡಿರಿ, ಅವರ ಹೆಸರನ್ನು ಸ್ತುತಿಸಿರಿ.
5ಯೆಹೋವ ದೇವರು ಒಳ್ಳೆಯವರು, ಅವರ ಕರುಣೆಯು ಯುಗಯುಗಕ್ಕೂ ಇರುವುದು. ಅವರ ಸತ್ಯತೆಯು ತಲತಲಾಂತರಕ್ಕೂ ಮುಂದುವರಿಯುವುದು.